ಸೆಪ್ಟೆಂಬರ್ ೯, ೨೦೧೦
ಲಾಗ್ ಇನ್
  
ಯೂಸರ್ ನೇಮ್
  
ಪಾಸ್‌ವರ್ಡ್
  
 
ಪಾಸ್‌ವರ್ಡ್ ಮರೆತಿದೆಯೆ??
ಹೊಸಬರೇ? ಇಲ್ಲಿ ನೋಂದಾಯಿಸಿ
  
ವಾರ್ತಾಪತ್ರ
  
ನಿಮ್ಮ ಈ ಮೇಲ್:
 
  
ಅನುಪಮಾ ಅನುವಾದಿಸಿದ ನಾಮದೇವ್ ಕವಿತೆ    
ಡಾ|| ಅನುಪಮಾ ಎಚ್. ಎಸ್.
ಗುರುವಾರ, 17 ಸೆಪ್ಟೆಂಬರ್ 2009 (04:51 IST)
ನಾಮದೇವ್ ಧಸಾಲ್
ಇದು ಕನ್ನಡದ ಹೊಸ ಕವಿತೆಗಳ ತಾಣ. ಬಿರಿದ ಕುಸುಮಗಳಿಂದ ಕಿಕ್ಕಿರಿದುಹೋಗಿರುವ ಖುಷಿಯ ಟೊಂಗೆಗಳಲ್ಲಿ ಸುಮ್ಮನೇ ಕುಳಿತಿರುವ ಒಂಟಿಹಕ್ಕಿಗಳು ಇಲ್ಲಿರುವ ಈ ಕವಿತೆಗಳು. ಯಾವುದೋ ಒಂದು ಮಾತಿಗೆ ಹೆದರಿ, ನೂರು ನೋಟಕೆ ಬೆದರಿ ಕೈಲಾಗದೇ ಕುಳಿತಿರುವ ಸಾಲುಗಳು ಇವು.

ಯಾವಾಗಲೂ ಈ ಜಾಗ ಹೀಗೆಯೇ ಇರುವುದಿಲ್ಲ. ಕೆಲವೊಮ್ಮೆ ಜೋರು ಬಾಯಿಯ ಗಟ್ಟಿ ತೋಳಿನ ಕವಿತೆಗಳೂ ಇಲ್ಲಿರುತ್ತವೆ.ಆದರೆ ಇವೆಲ್ಲವೂ ಕನ್ನಡದ ಕವಿತೆಗಳು.ಒಂದಕ್ಕೊಂದು ಸವತಿಯರಂತೆ ಒಂದೇಕಡೆ ಹೇಗಾದರೂ ಏಗಿಕೊಂಡಿರುತ್ತವೆ.ಒಮ್ಮೊಮ್ಮೆ ಇದೇ ತರಹದ ಜಾಯಮಾನಗಳ ಪರಭಾಷಾ ಕವಿತೆಗಳೂ ಇಲ್ಲಿ ಕನ್ನಡಕ್ಕೆ ಬಂದಿರುತ್ತವೆ. ಈ ದಿನ ಮರಾಠಿ ಕವಿ ನಾಮದೇವ್ ಧಸಾಲ್ ರ ಒಂದು ಕವಿತೆ ಇದೆ. ಕನ್ನಡಕ್ಕೆ ಅನುವಾದಿಸಿದ್ದಾರೆ ಡಾ.ಅನುಪಮಾ ಎಚ್.ಎಸ್.

ಅವಳು ತೊರೆದ ದಿನ

ಅವಳು ಹೋದ ದಿನ
ನನ್ನ ಮುಖಕ್ಕೆ ಕರಿ ಬಳಿದುಕೊಂಡೆ
ಕ್ರೂರಿ ಹುಚ್ಚು ಗಾಳಿಯ ಕಪಾಳಕ್ಕೆ ಬಾರಿಸಿದೆ.
ನನ್ನ ಬದುಕಿನ ಸಣ್ಣಸಣ್ಣ ಚೂರುಗಳ ಹೆಕ್ಕಿ
ಒಡೆದ ಕನ್ನಡಿಯೆದುರು ನಗ್ನನಾಗಿ ನಿಂತೆ.
ನನ್ನ ಮೇಲೆ ನಾನೇ ಪ್ರತೀಕಾರ ತೆಗೆದುಕೊಳ್ಳಲು ಬಿಟ್ಟೆ.
ಸೂರ್ಯನತ್ತ ಕರುಣೆದೋರಿ ದಿಟ್ಟಿಸಿ ಹೇಳಿದೆ, ‘ಓ ಮೊಳೆಯ ಚೆಂಡೆ!’
ಬಣ್ಣದ ಕನಸ ನೇಯುವ ಕಲಾವಿದರಿಗೆಲ್ಲ ಹುಡುಹುಡುಕಿ ಶಾಪ ಹಾಕಿದೆ;
ಪೂರ್ವದಿಂದ ಪಶ್ಚಿಮದೆಡೆಗೆ ನಡೆದೆ;
ದಾರಿಯಲ್ಲಿ ಬಿದ್ದ ಕಲ್ಲನೆತ್ತಿ ನನ್ನತ್ತಲೇ ಒಗೆದೆ.
ಗಹಗಹಿಸಿ ನಗುವ ನೀರು ಎಷ್ಟು ಭೋರ್ಗರೆದು ಹರಿಯುತ್ತಿದೆ
ಬೆಟ್ಟ ಕಣಿವೆಗಳ ಸುತ್ತುತ್ತಾ.
ಯಾವ ಕಡಲ ಕೂಡಲು ನೋಡುತ್ತಿದೆ?
ಅಥವಾ ಕಡಲಾಳದ ನೆಲದ ಮಣ್ಣಮೇಲಿಳಿಯುವುದೇ?
ಅಂದು ಅವಳು ಹೋದ ದಿನ
ನಾನು ನನ್ನವನಾಗಿಯಾದರೂ ಇದ್ದೆನೆ?
ಅವಳ ಹೆಣವನ್ನೂ ಅಪ್ಪಿಕೊಳ್ಳಲಾಗಲಿಲ್ಲ ನನಗೆ
ಮನ ತುಂಬಿ ಅಳಲಿಕ್ಕೂ ಆಗಲಿಲ್ಲ.
ಅವಳು ತೊರೆದು ಹೋದ ದಿನ
ನಾನು ನನ್ನ ಮುಖಕ್ಕೆ ಮಸಿ ಬಳಿದುಕೊಂಡೆ.

ಮರಾಠಿ ಮೂಲ: ನಾಮದೇವ್ ಧಸಾಲ್
ಕನ್ನಡಕ್ಕೆ: ಅನುಪಮಾ ಎಚ್.ಎಸ್.

ಪುಟದ ಮೊದಲಿಗೆ
 
Votes:  4     Rating: 3.75    
 
 
ಸಂಬಂಧಿಸಿದ ಲೇಖನಗಳು
  ಮನುಷ್ಯನ ಅಮಾನುಷ ಚಿತ್ರಸತ್ಯಗಳು
  ಕೋಮುಗಲಭೆಯೂ ಜೀವನ ಸರಪಳಿಯೂ:ಬಿ.ಕೆ.ಶಿವರಾಂ ನೆನಪುಗಳು
  ರಂಜಾನ್ ಎಂಬ ಉಪವಾಸ ಸಂಭ್ರಮ:ಫಕೀರ್ ಬರಹ
  ನಾವೆಲ್ಲ ಬೆಳೆದು ದೊಡ್ಡವರಾಗಿ!
  ಸೋಮವಾರ ಶಿವಮೊಗ್ಗದಲ್ಲಿ ತಾರಾನಾಥರ ಸರೋದ್
  ಶಿಕ್ಷಣವೆಂದರೆ ಶಿಕ್ಷೆಯೆಂದೇಕೆ ಕೆಲವೊಮ್ಮೆ ಕೇಳಿಸುತ್ತದೆ?
  ಮಾತಿನ ಮಳೆಯ ಯೋಗರಾಜ್ ಪಂಚರಂಗಿ
  ಯಡಿಯೂರಪ್ಪನವರು ಬೀದರಿಗೆ ಬಂದ ವೃತ್ತಾಂತವು
  ಧಾರಾಳ ಮಾತು ನಮಗೇ ಆಪತ್ತು!
  ಏಳು ಕಲಾವಿದೆಯರ ಏಳು ವರ್ಣಗಳು
  ರಾಮ ಭಕ್ತ ಹನುಮನೋ, ಹನುಮ ಭಕ್ತ ರಾಮನೋ
  `ಅಲ್ನೋಡಿ ಕಲೀರಿ' ಅಂದ್ರೇನು ದರ್ಶನ್?
  ಹುಲ್ಲಿನ ಮೇಲೆ ಕೂತ ಹುಡುಗ ರಾಮುಲು
  ಜಾಗತೀಕರಣ ನೀತಿಕಥಾ-6: ಗುರುಚರಿತೆ
  ನ್ಯೂಯಾರ್ಕ್ ಜಿಮ್ ಬಳ್ಳಾರಿ ದೇವರ ನೋಡಲು ಬಂದ ಕಥೆ!
  ಶಿಕ್ಷಣ ಮೀಸಲು ನೀತಿಯನ್ನು ನೀವೂ ಬೆಂಬಲಿಸಿ
  ಯೋಗರಾಜ್ ಭಟ್ ಬರೆದ `ಪಂಚರಂಗಿ' ಕವಿತೆಗಳು
  ನೋವೆಂದರೆ ಅಳು ಮಾತ್ರವೇ? :ಹರೀಶ್ ಬರಹ
  ರಾಖೀ ಹಬ್ಬದ ದಿನ ವಿಲಾಸಣ್ಣನ ನೆನಪು
  ಭಿಕ್ಷುಕರು ಮತ್ತು ಸಾಹಿರ್ ಸಾಲುಗಳು: ದಿವಾಕರ್ ಬರಹ
  ಕನ್ನಡ ಯುವ ಬರಹಗಾರರಿಗೆ ಟೊಟೊ ಪುರಸ್ಕಾರ
  ಕನ್ನಡದ ಜಗನ್ಮೋಹಿನಿ ಹರಿಣಿಯೊಂದಿಗೆ ಒಂದಷ್ಟು ಹರಟೆ
  ಪೆಜತ್ತಾಯ ಬರೆದ ತ್ರಿಚಕ್ರಿ ಗೋವಿಂದ ಭಟ್ಟರ ಕಥೆ
  ಜಾಗತೀಕರಣ ನೀತಿಕಥಾ-5: ಕಲ್ಲು ಸಿಕ್ಕರೆ ಕೊಳ್ಳಿರೋ...
  ಏನೂ ನನ್ನದಲ್ಲವೆಂಬ ಸ್ವಾತಂತ್ರ್ಯ:ನಾಗಶ್ರೀ ನಂಬಿರುವುದು
  ಸ್ವಾತಂತ್ರ್ಯ ಅಂದ್ರೆ ಏನು?:ಸುಶ್ರುತ ಕೇಳಿದ ಪ್ರಶ್ನೆಗಳು
  ಮೆಟ್ರೋ ಬದಿಯಲ್ಲೇ ಮಲ್ಲಿಗೆ ದಂಡೆಯ ಪರಿಮಳ
  ಗುಬ್ಬಚ್ಚಿಗಳಿಗೆ ಸ್ವಾತಂತ್ರ್ಯದ ಕಾಳು: ಹೇಮಾ ಬರಹ
  ಸ್ವಾತಂತ್ರದ ಮೊದಲ ಕ್ಷಣಗಳು:ಅಯ್ಯಂಗಾರ್ ನೆನಪುಗಳು
  ಕೆಂಡಸಂಪಿಗೆ ಕಮೆಂಟಿಗರು ಮೊನ್ನೆಯಿಂದಲೇ ಸ್ವತಂತ್ರರು!
  ಹಳ್ಳಿ ಹೈಕಳಿಗೆ ಬೇಡದ ಕನ್ನಡ ಶಾಲೆ: ಪೆಜತ್ತಾಯ ಚಿಂತನೆ
  ಅನು ಪಾವಂಜೆ ಬರೆದ ಅಜ್ಜನ ಮನೆಯ ನೆನಪುಗಳು
  ಒಬ್ಬ ಅತಿಸಾಮಾನ್ಯನ ಗೊಣಗಾಟ : ಸುದರ್ಶನ್ ಬರಹ
  ಮುಂಬೈನ ಮಂಕಿ ಬ್ರಿಡ್ಜ್ ನಲ್ಲೊಬ್ಬ ಪತಿತ ಪಾವನ ತಿರುಕ
  ಗ್ರೆಗರಿಯವರ ಪ್ರಶ್ನೆಗಳಿಗೆ ಯಾರು ಉತ್ತರಿಸುತ್ತಾರೆ?
  ಅಮೇರಿಕಾ ದೇಶದ ಅಂಗಳದ ಅಂಗಡಿಗಳು
  ಗವಾಕ್ಷಿಯಲ್ಲಿ ಬಂದಿರುವ ಡಬ್ಬಿಂಗ್ ಪಿಶಾಚಿ!
  ಮಹಾನುಭಾವ ಬಿ.ಆರ್.ಪಂತುಲು:ಬಸವರಾಜು ಬರಹ
  ನಾನೂ ಲಾಂಗ್ ಜಂಪ್ ಹಾರಿದೆ: ಆರ್.ಜಿ.ಭಟ್ ಬರಹ
  ಆಸ್ಟ್ರೇಲಿಯಾ ಪತ್ರ: ದೇವರ ನಂಬದ ಸ್ತ್ರೀ ಪ್ರಧಾನಿ
  ತೆಂಗಿನ ಜುಟ್ಟೂ ತಮ್ಮನ ಜುಟ್ಟೂ: ಪರೀಕ್ಷಿತಾ ಬರಹ
  ಸ್ಯಾನ್ ಬಾರ್ನ್ ಪ್ರಾಯೋಗಿಕ ಕೃಷಿ ಕ್ಷೇತ್ರ: ವೆಂಕಟೇಶ್ ಬರಹ
  ಸವಣೂರಿನ ಭಂಗಿಗಳು ತೋರಿಸಿದ ಸತ್ಯಗಳು
  ಗ್ರೆಗರಿ ಕಳಕೊಂಡದ್ದು,ಎಂ ಆರ್ ಪಿ ಎಲ್ ಕಳೆದುಕೊಂಡದ್ದು
  ನಾರೀಕೇರಳ...ಮಳೆ,ಸುದ್ದಿರಾಜಕೀಯ:ಕನಕ ಬರಹ
  ಜಾಗತೀಕರಣ ನೀತಿಕಥಾ- ಕತೆಯೆಂಬ ಕತೆ
  ಇಟ್ಟಿಗೆ ಮಣ್ಣಿನ ರಾಶಿಯ ಮುಂದೆ..:ಲಕ್ಷ್ಮಿ ಕುಡ್ಲ ಬರಹ
  ಅಕ್ರಮ ಗಣಿ ಕಂಡರೂ ನಾವು ಯಾಕೆ ಕುರುಡರು?
  ಮಂಗಳೂರಲ್ಲಿ ಪತ್ರಾವೋ ಉಪವಾಸ ಕುಂತಿದ್ದರು...
  ಗ್ರೆಗರಿ ಪತ್ರಾವೊಗಾಗಿ ವೈದೇಹಿ ಮೊರೆ
  ಗ್ರೆಗರಿ ಪತ್ರಾವೋ ಮನೆಗೆ ಜೆ.ಸಿ.ಬಿ. ಎರಗಿದ ಕಥೆ
  ಅರವತ್ತರ ಉಲ್ಲಾಸದಲ್ಲಿ ನಸೀರುದ್ದೀನ್ ಷಾ: ಬಸು ಬರಹ
  ಜಾಗತೀಕರಣ ನೀತಿಕಥಾ 3: ಸಿಐಡಿ ಹೇಳಿದ ಕತೆ
  ಆಸ್ಟ್ರೇಲಿಯಾ ಓಲೆ: ಓದಲು ಬಂದು ತಾಯಾದವರ ಕಥೆ
  ಗಣಿಯಿಂದ ಹೊರಬರುತ್ತಿರುವ ದುರ್ನಾತಗಳು