Advertisement

ಕೆಂಡಸಂಪಿಗೆ

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ವೈದೇಹಿ ಬರೆಯುವ ಕಳೆದುಹೋದ ಗಿರಿಬಾಲೆಯ ಚರಿತ್ರೆ – ೨

ಅಂದು ನಾನು ಲೇಖಕಿ `ಗಿರಿಬಾಲೆ’ಯನ್ನು ಕಂಡದ್ದು ಶಾರದೆಯ ನೇರ ಬಹಿರಂಗ ಭಕ್ತೆಯಾಗಿ. ಅಸ್ಖಲಿತ ವಾಗ್ಝರಿಯ, ವಯಸ್ಸಿಗೆ ಮಣಿದು ಮಸುಕಾಗದ ಸುಸ್ಪಷ್ಟ ನೆನಪುಗಳ, ಪುಟಿಪುಟಿವ ಚೇತನವನ್ನು. ಒಂದು ಪ್ರಶ್ನೆ ಹಾಕಿದರೆ ಸಾಕು ಆ ಕಾಲಕ್ಕೆ ಓಡುತ್ತಿದ್ದರು ಅವರು. ಆ ಪ್ರಾಯದಲ್ಲಿಯೇ ನಿಲ್ಲುತ್ತಿದ್ದರು. ಎರಡು ದಶಕಗಳ ಕಾಲ ಕನ್ನಡ ಸಾಹಿತ್ಯಕ್ಕೆ ಸ್ತ್ರೀ ಧ್ವನಿ ಕೂಡಿಸಿದಾಕೆ, ಸ್ತ್ರೀಯರ ಪ್ರಗತಿಗಾಗಿಯೇ ಒಂದು ಪತ್ರಿಕೆಯನ್ನು ಹೊರಡಿಸಿದಾಕೆ, ಆಶು ರಚನಕಾರ್ತಿ, ಮಕ್ಕಳಿಗಾಗಿ ಬರೆದವರು, ಕಥೆ ಕವನ ರಚಿಸಿ (ಕನ್ನಡದಲ್ಲಿ ಮಾತ್ರವಲ್ಲ, ತುಳುವಿನಲ್ಲೂ) ಕಾಲಂ ಬರೆದು, ಹರಿಕಥೆ ಮಾಡಿ, ಹಾಡಿ, ಹಾಡಿಸಿ, ವೀಣೆ ನುಡಿಸಿ, ನಾಟಕ ರಚಿಸಿ, ಆಡಿಸಿ, ನಟಿಸಿ- ಒಟ್ಟಿನಲ್ಲಿ ಕಲೆ ಹಾಗೂ ಸಾಹಿತ್ಯಲೋಕದಲ್ಲಿ ಮಿಂಚಿದಾಕೆ – ಅಂತೆಲ್ಲ ಒಂದು ಕಾಲದ ಅವರ ಕ್ರಿಯಾಶೀಲತೆಯನ್ನು ಕೆದಕಿ ಕೇಳ ಹೊರಟರೆ `ಏನೋ. ಎಲ್ಲ ಒಂದು ಹುಚ್ಚಲ್ಲವೆ!’ ಎಂದುಬಿಡುತ್ತಿದ್ದರು. ಬುದ್ಧಿ ಇಲ್ಲದಾಗ ಮಾಡಿದ ಕೆಲಸದಂತೆ, ಅದರ ಪ್ರಸ್ತಾಪವನ್ನೇ ಎತ್ತಲು ಮನಸ್ಸಿಲ್ಲದವರಂತೆ ಮಾತು ಬದಲಾಯಿಸುತ್ತಿದ್ದರು. ಆದರೆ ಒಮ್ಮೊಮ್ಮೆ ಹಾಗೆ ಮರೆಯ ಹೋಗುತ್ತ ಹೋಗುತ್ತ...

Read More

ವೈದೇಹಿ ಬರೆದ ಕಳೆದುಹೋದ ಗಿರಿಬಾಲೆಯ ಚರಿತ್ರೆ

ಕನ್ನಡದ ಈ ಗಿರಿಬಾಲೆಯ ಹೆಸರು ಶ್ರೀಮತಿ ಸರಸ್ವತೀಬಾಯಿ ರಾಜವಾಡೆ. ಸ್ರೀವಾದ, ಮಹಿಳಾ ಸಬಲೀಕರಣ ಇತ್ಯಾದಿ ಪದಗಳು ಕನ್ನಡದಲ್ಲಿ ಇನ್ನೂ ಕಣ್ತೆರೆಯದಿದ್ದ ಕಾಲದಲ್ಲಿಯೇ ತನ್ನ ಬರಹಗಳಲ್ಲಿ ಈ ಪದಗಳಿಗೆ ಜೀವಕೊಟ್ಟವರು ಈ ಗಿರಿಬಾಲೆ. ಅಪ್ರತಿಮ ಸುಂದರಿಯಾಗಿದ್ದ ಗಿರಿಬಾಲೆ ತನ್ನ ಕೊನೆಯ ದಿನಗಳನ್ನು ವಿರಾಗಿಣಿಯಂತೆ ಕಳೆದವರು. ಕನ್ನಡದ ಮಹತ್ವದ ಲೇಖಕಿ ವೈದೇಹಿ ಗಿರಿಬಾಲೆ ಅರ್ಥಾತ್ ಶ್ರೀಮತಿ ಸರಸ್ವತೀಬಾಯಿ ರಾಜವಾಡೆಯವರ ಕುರಿತ ಪುಸ್ತಕವೊಂದನ್ನು ಸಂಪಾದಿಸಿದ್ದಾರೆ. ಸಾಗರದ ಅಕ್ಷರ ಪ್ರಕಾಶ ಈ ಪುಸ್ತಕದ ಪ್ರಕಾಶಕರು. ಗಿರಿಬಾಲೆಯವರನ್ನು ಕಂಡು ಮಾತನಾಡಿಸಿ ಬರೆದ ವೈದೇಹಿಯವರ ಲೇಖನ ಇಲ್ಲಿದೆ. ಅದು ೧೯೮೭ರ ದೀಪಾವಳಿಯ ಸಮಯ. ರಾಜವಾಡೆಯವರು ಕಟ್ಟಿಸಿ ನಿರ್ವಹಿಸುತ್ತಿದ್ದ ಉಡುಪಿಯ ಚಿಟ್ಪಾಡಿಯಲ್ಲಿರುವ ಶ್ರೀ ಶಾರದಾಂಬಾ ದೇವಸ್ಥಾನಕ್ಕೆ ಹೋದಾಗ ಸಂಜೆ ಗಂಟೆ ಏಳು ಏಳೂವರೆ. ಕರೆಂಟು ಹೋದ ಕತ್ತಲಿಗೆ ಎಣ್ಣೆದೀಪ ಹಚ್ಚಿಟ್ಟುಕೊಂಡು ಪೌಳಿಯ ಕಂಬಕ್ಕೊರಗಿ ಅವರು ಯಾರೊಡನೆಯೋ ಮಾತಾಡುತ್ತಾ ಬತ್ತಿ ಹೊಸೆಯುತ್ತಾ ಕುಳಿತಿದ್ದರು. ಆ ಮಿಣಿ ಮಿಣಿ ಬೆಳಕಲ್ಲಿ ಕುತೂಹಲದ ಕಣ್ಣನ್ನು ಅಗಲ ಕಿರಿದುಗೊಳಿಸಿ ಒಮ್ಮೆ ಮುಖವೆತ್ತಿ ನನ್ನನ್ನು ನೋಡಿದರು. ಇವರೇ...

Read More

ವೈದೇಹಿ ಕಾಲಂ – ಮೀನಾಕ್ಷಮ್ಮನ ಸಿನೆಮಾ ಕಥೆ

ಮೀನಾಕ್ಷಮ್ಮನಿಗೆ ಕತೆ ಕಾದಂಬರಿ ಮಾತ್ರವಲ್ಲ, ಸಿನೆಮಾವೆಂದರೂ ಪಂಚಪ್ರಾಣವಿತ್ತು. ಹೊಸ ಸಿನೆಮಾ ಬಂತೆಂದರೆ ಹೇಗಾದರೂ ಬಿಡುವು ಮಾಡಿಕೊಂಡು ಸೆಕೆಂಡ್ ಶೋಗೆ ಎದ್ದೇ ಬಿಡುವರು ಅವರು. ನೋಡುವುದೆಂದರೆ ಬರಿದೆ ನೋಡುವುದೆ? ಮರುದಿನ ಹೊಲಿಗೆ ಚಾವಡಿಯಲ್ಲಿ ಅದರ ಕತೆ, ವಿಮರ್ಶೆ ಎಲ್ಲ ಬಂದವರ ಜೊತೆ ಆಗಬೇಕು. ಅದು ಖಂಡಿತವಾಗಿಯೂ ನಡೆದದ್ದೇ ಅಂತ ನಾವು ಮಕ್ಕಳು ಅಂದುಕೊಳ್ಳಬೇಕು, ಹಾಗೆ. ಕುಂದಾಪುರ ಆಗ ಮದರಾಸು ಪ್ರಾಂತ್ಯಕ್ಕೆ ಸೇರಿತ್ತಾಗಿ ಟಾಕೀಸಿನಲ್ಲಿ ಬರೀ ತಮಿಳು ಸಿನೆಮಾ ಬರುತಿದ್ದೇ ಹೆಚ್ಚು. ಹಾಗೆ ಬಂದ ತಮಿಳು ಸಿನೆಮಾಗಳಲ್ಲೊಂದು ಮಿಸ್ಸಮ್ಮ (ಮಿಸ್ ಮೇರಿ). ಆರ್ ಗಣೇಶನ್ ಮತ್ತು ಸಾವಿತ್ರಿ ತಾರಾಗಣ. ಅದರ ತಮಿಳು ಮಾತ್ರವಲ್ಲ ತೆಲುಗು ಅವತರಣಿಕೆಯನ್ನೂ ಅವರು ಮಾತ್ರವಲ್ಲ ನಾವೆಲ್ಲರೂ ಹುಚ್ಚುಕಟ್ಟಿ ನೋಡಿ ಬಂದಿದ್ದೆವು. ಸುಮಾರು ದಿನ ಆ ಹೊಲಿಗೆಯ ಚಾವಡಿಯಲ್ಲಿ ಮಿಸ್ಸಮ್ಮನದೇ ಕತೆ. ಆರ್ ಗಣೇಶನ್ ಕಡೆಗೆ ಹಾಗೆ ಹೇಳಿದ, ಸಾವಿತ್ರಿ ಹೀಗೆ ಹೇಳಿದಳು ಅಂತ ಅವರೆಲ್ಲ ಮನೆ ಮಂದಿಯ ಹಾಗೆ. ಅವರ ಪಾತ್ರಗಳ ಹೆಸರಿನ ಹಂಗೇ ಇಲ್ಲದೆ. ‘ರಾವೋಯಿ ಚಂದಮಾಮಾ,...

Read More

ಜನಮತ

ಕೆಂಡಸಂಪಿಗೆ ಬರಹಗಳು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

kendasampige

ಜಗತ್ತಿನೆಲ್ಲೆಡೆ ಹಬ್ಬಿರುವ ಕನ್ನಡದ ಈ ಬೆಡಗು ಪ್ರತಿ ದಿನವೂ ಅರಳುತ್ತಾ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಸಾಹಿತ್ಯ, ಸಿನೆಮಾ, ಜಾನಪದ, ರಾಜಕೀಯ - ಹೀಗೆ ಕನ್ನಡ ನಾಡಿನ ಇತಿಹಾಸವನ್ನೂ ಹಾಗೂ ದಿನ ನಿತ್ಯದ ಉಸಿರನ್ನೂ ನಿಮ್ಮ ಮುಂದೆ ಸೂಸುತ್ತಿದೆ. ಭಾಷೆ, ಸಂಸ್ಕೃತಿ ಇತ್ಯಾದಿಗಳ ಹೆಸರಿನಲ್ಲಿ ಭಾಷಾಂಧರೂ, ಧರ್ಮಾಂಧರೂ ಆಗಿಬಿಡುವ ಈ ಅಪಾಯದ ಹೊತ್ತಲ್ಲಿ ಕನ್ನಡ ನಾಡಿನ ನಿಜದ ಗುಣವನ್ನು, ಅದರ ಭಾಷಾ ವೈವಿಧ್ಯಗಳನ್ನು, ಪ್ರೀತಿ ಸಹನೆಗಳನ್ನು, ಜನ ಜೀವನದ ವೈವಿಧ್ಯಗಳನ್ನು ಹಾಗೂ ಎಲ್ಲಕ್ಕಿಂತ ಹೆಚ್ಚಾಗಿ ಜಗತ್ತಿನೆಲ್ಲೆಡೆಯ ಮಾನವ ಜೀವಿತದ ಅಪಾರ ಸಾಧ್ಯತೆಗಳನ್ನು ಕೆಂಡಸಂಪಿಗೆ ಪ್ರತಿದಿನವೂ ತನ್ನ ಬರಹಗಳ ಮೂಲಕ ಕನ್ನಡ ಓದುಗ ಲೋಕಕ್ಕೆ ಅರುಹುತ್ತಿದೆ. ಅಂತರ್ಜಾಲವೆಂಬ ಅರಿವಿನ ಸ್ಫೋಟದ ಆಕಾಶದಲ್ಲಿ ಲೇಖಕರು, ಓದುಗರು, ಸಂಪಾದಕರು, ವರದಿಗಾರರು ಎಂಬ ಅಂತರಗಳೇನೂ ಇಲ್ಲ. ಬರೆಯುವ ಒಂದು ಕ್ರಿಯೆಯಷ್ಟೇ ದೊಡ್ಡದು ಓದುವುದು. ಅದರಷ್ಟೇ ದೊಡ್ಡದು ಚಿತ್ರಗಳು.ಇವೆಲ್ಲಕ್ಕಿಂತ ದೊಡ್ಡದು ಇವೆಲ್ಲದರ ನಡುವೆ ನಡೆಯುವ ಪ್ರತಿಕ್ರಿಯೆಗಳು ಹಾಗೂ ಸಂವಾದ. ಕೆಂಡಸಂಪಿಗೆಯ ಬೆಳವಣಿಗೆಗೆ ಬರವಣಿಗೆಗಳು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಓದುಗರ ಪ್ರತಿಕ್ರಿಯೆಗಳು ಎಂಬುದು ಕೆಂಡಸಂಪಿಗೆಯ ನಂಬಿಕೆ. ಓದುಗರ ನಿಮ್ಮ ಇಷ್ಟಗಳನ್ನು ಮರೆತು ಕೆಂಡಸಂಪಿಗೆ ಮುಂದೆ ಹೋಗುವುದಿಲ್ಲ. ಆದರೆ ಹಾಗೆ ಹೋಗುವಾಗ ಅದರ ದಾರಿಯನ್ನೂ ಮರೆಯುವುದಿಲ್ಲ. ಓದುಗರ ಇಷ್ಟಗಳನ್ನು ಗೌರವಿಸುವ ಜೊತೆ ಜೊತೆಯಲ್ಲೇ ನಮ್ಮ ಉದ್ದೇಶಗಳನ್ನೂ ಮರೆಯದ ಹಾಗೆ ಮುಂದೆ ಹೋಗುತ್ತೇವೆ. ಕೆಂಡಸಂಪಿಗೆಯ ಉದ್ದೇಶ ಕನ್ನಡದ ಜೀವಂತ ಸಂಸ್ಕೃತಿಯನ್ನು ಅದರ ಎಲ್ಲ ಪರಿಮಳಗಳ ಜೊತೆಗೆ ಓದುಗರ ಮುಂದೆ ತೆರೆದಿಡುವುದು.
kendasampige
kendasampige3 hours ago
ಒಂದು ಮದುವೆಯ ಸಂಭ್ರಮ ಮತ್ತು ಮೂರು ಸಾವಿನ ಶೂನ್ಯ:ಫಾತಿಮಾ ರಲಿಯಾ ಅಂಕಣ
ಪ್ರತೀ ಸಾವೂ ಒಂದು ವಿವರಿಸಲಾಗದ ಶೂನ್ಯವನ್ನೂ, ತಲ್ಲಣವನ್ನೂ ಸೃಷ್ಟಿಸುತ್ತದೆ. ಹಾಗೆ ನೋಡುವುದಾದರೆ ಯಾರ ಸಾವೂ, ಯಾವ ಸಾವೂ ನೆಮ್ಮದಿಯನ್ನು, ಸಂಭ್ರಮವನ್ನು ತರುವುದಿಲ್ಲ. ವರ್ಷಗಳ ಕಾಲ ಹಾಸಿಗೆ ಹಿಡಿದವನು, ಕೋಮಾದಲ್ಲಿದ್ದವನು ಮರಣ ಹೊಂದಿದರೂ ಒಂದು ಬಗೆಯ ಶೂನ್ಯತೆ ಕಾಡದೇ ಇರದು. ಅವನು ಮಲಗಿದ್ದಲ್ಲೇ ಅನೂಹ್ಯವಾದ ಯಾವುದೋ ಸಂಬಂಧವೊಂದು ಬೆಳೆದು ಬಿಟ್ಟಿರುತ್ತದೆ, ಅದನ್ನು ಸುಲಭವಾಗಿ ಕತ್ತರಿಸಲಾಗುವುದಿಲ್ಲ. ಬದುಕೆಂಬ ಅಗಾಧ ಸಂತೆಯೊಳಗೆ ಸಾವೆಂಬುವುದು ಸಂತನಂತೆ, ಅದಕ್ಕೆ ಅಬ್ಬರವಿಲ್ಲ, ವೈಭವವಿಲ್ಲ, ಕೂಗಿ ಕರೆದು ವ್ಯಾಪಾರ ಕುದುರಿಸಬೇಕೆಂದಿಲ್ಲ.
ಫಾತಿಮಾ ರಲಿಯಾ ಬರೆಯುವ ಪಾಕ್ಷಿಕ ಅಂಕಣ.
Fathima Raliya Hejamady

https://bit.ly/2HrhzI9
kendasampige
kendasampige1 day ago
ಗಂಡು ಹೆಣ್ಣಿನ ನಡುವೆ ಸುಳಿದಾಡಿದ ಬಹುರೂಪಿ:ಸುಜಾತಾ ತಿರುಗಾಟ ಕಥನ

“ನಾನು ಗಂಡು ಎಂಬುದೇ ಕುಡುಕರಿಗೆ ತಿಳಿದಿರಲಿಲ್ಲ. ಅವರು ನನ್ನನ್ನು ಹಿಂಸಿಸಿದ್ದನ್ನು ನೆನೆದರೆ….ಈಗಲೂ ಯಾವುದೇ ಹೆಣ್ಣುಮಗುವಿನ ಮೇಲಿನ ಅತ್ಯಾಚಾರದ ಸುದ್ಧಿ ಕಿವಿಗೆ ಬಿದ್ದರೆ ನಾನು ನಡುಗಿ ಹೋಗುತ್ತೇನೆ. ಅಂದಿನ ಹಿಂಸೆಯ ನೆನಪಿನ ನೆರಳಲ್ಲಿ…” ಎಂದು ಕಣ್ಣೀರಿಟ್ಟರು. ಈ ಮಾತು ಕೇಳುವಾಗ ಅವರು ಗಂಡು ಹೆಣ್ಣಿನ ಗೆರೆ ಮೀರಿದ ಕೇವಲ ಒಂದು ಜೀವವಾಗಿದ್ದರು.”
ಸುಜಾತಾ ತಿರುಗಾಟ ಕಥನ
Sujatha HR

https://bit.ly/2HnuqeB
kendasampige
kendasampige2 days ago
ಗುರುಗಣೇಶ ಭಟ್ ಡಬ್ಗುಳಿ ಬರೆದ ಎರಡು ಹೊಸ ಕವಿತೆಗಳು
Guruganesh Bhat

https://bit.ly/2W3M3U9

ನಮ್ಮ ಟ್ವಿಟ್ಟರ್

3 hours ago
ಒಂದು ಮದುವೆಯ ಸಂಭ್ರಮ ಮತ್ತು ಮೂರು ಸಾವಿನ ಶೂನ್ಯ:ಫಾತಿಮಾ ರಲಿಯಾ ಅಂಕಣ
ಪ್ರತೀ ಸಾವೂ ಒಂದು ವಿವರಿಸಲಾಗದ ಶೂನ್ಯವನ್ನೂ, ತಲ್ಲಣವನ್ನೂ ಸೃಷ್ಟಿಸುತ್ತದೆ. ಹಾಗೆ ನೋಡುವುದಾದರೆ ಯಾರ ಸಾವೂ, ಯಾವ ಸಾವೂ ನೆಮ್ಮದಿಯನ್ನು, ಸಂಭ್ರಮವನ್ನು ತರುವುದಿಲ್ಲ. ವರ್ಷಗಳ ಕಾಲ ಹಾಸಿಗೆ ಹಿಡಿದವನು, ಕೋಮಾದಲ್ಲಿದ್ದವನು ಮರಣ... https://t.co/VIdEciG8Oz
3 hours ago
ಒಂದು ಮನೆಯ ಸಂಭ್ರಮ ಮತ್ತು ಮೂರು ಸಾವಿನ ಶೂನ್ಯ:ಫಾತಿಮಾ ರಲಿಯಾ ಅಂಕಣ

ಪ್ರತೀ ಸಾವೂ ಒಂದು ವಿವರಿಸಲಾಗದ ಶೂನ್ಯವನ್ನೂ, ತಲ್ಲಣವನ್ನೂ ಸೃಷ್ಟಿಸುತ್ತದೆ. ಹಾಗೆ ನೋಡುವುದಾದರೆ ಯಾರ ಸಾವೂ, ಯಾವ ಸಾವೂ ನೆಮ್ಮದಿಯನ್ನು, ಸಂಭ್ರಮವನ್ನು ತರುವುದಿಲ್ಲ. ವರ್ಷಗಳ ಕಾಲ ಹಾಸಿಗೆ ಹಿಡಿದವನು, ಕೋಮಾದಲ್ಲಿದ್ದವನು ಮರಣ... https://t.co/VIdEciG8Oz
2 days ago
ಗುರುಗಣೇಶ ಭಟ್ ಡಬ್ಗುಳಿ ಬರೆದ ಎರಡು ಹೊಸ ಕವಿತೆಗಳು
Guruganesh Bhat

https://t.co/e0GU1psYRh https://t.co/e0GU1psYRh

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಗದ್ಯಂ ಹೃದ್ಯಂ:ಅಶೋಕ ಶೆಟ್ಟರ್ ಅಂಕಣ ಸಂಕಲನದ ಕುರಿತು ಚಂದ್ರಶೇಖರ ಆಲೂರು

''ನಾನು ಕಂಡುಕೊಂಡಂತೆ "ಗದ್ಯಂ ಹೃದ್ಯಂ" ನಲ್ಲಿ ನಾಲ್ಕು ಬಗೆಯ ಬರಹಗಳಿವೆ. ಆತ್ಮಕಥಾನಕವಾದ ಬರಹಗಳು, ಪ್ರವಾಸ ಕಥನ, ವ್ಯಕ್ತಿಚಿತ್ರಗಳು ಮತ್ತು ಸಮಕಾಲೀನ ವಸ್ತು, ಘಟನಾವಳಿಗಳನ್ನು ಕುರಿತ ಬಿಡಿ ಲೇಖನಗಳು....

Read More

ವಾರ್ತಾಪತ್ರಕ್ಕಾಗಿ