Advertisement

Category: ಸಂಪಿಗೆ ಸ್ಪೆಷಲ್

ಇದೇನಿದು!! ಸಂತೆ, ಕೋವಿ…

ಮನೆಗೆ ಬಂದವರು ಬಾ ಇಲ್ಲಿ ಎಂದು ಕರೆದರು. ಓದು ಈ ಚೀಟಿ ಎಂದು ಕೊಟ್ಟರು. ಅಲ್ಲೊಬ್ಬ ವೈದ್ಯ ಮಹಾಶಯ ಮನುಷ್ಯರ ನೆರಳಿಗೆ ‘ಟ್ರೀಟ್‌ಮೆಂಟ್’ ಕೊಡುತ್ತಿದ್ದನಂತೆ. ಅವರಿಗೆ ಚಿಕ್ಕಮಗಳೂರಿನಲ್ಲಿ ಸನ್ಮಾನವಂತೆ. ಅವರನ್ನು ನೋಡಲು ನೂಕು ನುಗ್ಗಲಾಟ ಸಂತೆಯಲ್ಲಿ. ಎಷ್ಟು ನಿಜ, ಎಷ್ಟು ಸುಳ್ಳು, ವಾಸಿಯಾಗುವುದಾದರೂ ಹೇಗೆ. ಇಂಥವರಿಗೂ ರೋಗಿಗಳ ನುಗ್ಗಾಟವಿರುತ್ತೆಲ್ಲ ಅಂದರು. ಮಾರನೆಯ ದಿನದ ಪತ್ರಿಕೆ ನೋಡಿ ಇನ್ನೂ ಕುತೂಹಲ, ಆಶ್ಚರ್ಯ, ಆ ವೈದ್ಯ ಮಹಾಶಯನಿಗೆ ಕೊಟ್ಟ ಸನ್ಮಾನದ ಬಗ್ಗೆ, ಪತ್ರಿಕೆಯಲ್ಲಿ ದೊಡ್ಡದಾಗಿ ವರದಿಯಾಗಿದೆ! ಮೂಡಿಗೆರೆ ಹ್ಯಾಂಡ್ ಪೊಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ 

Read More

ಕಾರ್ ಕಾರ್ ಕಾರ್ ಎಲ್ನೋಡಿ ಕಾರ್

ಕೆಟ್ಟ ಮೇಲೆ ಬುದ್ಧಿ ಬಂತು ಅಂತಾರಲ್ಲ ಹಾಗೆ ನಾನು ಈ ಘಟನೆಯಾದಮೇಲೆ ಕಾರೊಳಗೆ ಇಂಥಾ ಡೇಂಜರಸ್ ಐಟಮ್ ಗಳನ್ನು ತೆಗೆದುಕೊಂಡು ಹೋಗುತ್ತಿರಲಿಲ್ಲ. ಸಿಕ್ಕಾಪಟ್ಟೆ ಪ್ರೀತಿಯಿಂದ ಇವನು ನೋಡಿಕೊಳ್ಳುತ್ತಿದ್ದ ಕಾರು ನಮ್ಮನ್ನ ಅಕ್ಕ ಪಕ್ಕದ ದೇಶಗಳಿಗೆ ಸುಖವಾಗಿ ಕರೆದುಕೊಂಡು ಹೋಗಿ ಬರುತ್ತಿತ್ತು. ಸ್ವಲ್ಪ ವರ್ಷಗಳಾದಮೇಲೆ ಒಂದು ದಿನ ಬೆಳಗ್ಗೆ ಇವನು ನನ್ನನ್ನು ಸ್ಕೂಲಿಗೆ ಬಿಡುವಾಗ ಕಾರಿನಲ್ಲಿ ಏನೋ ಕಟ್ ಕಟ್ ಕಟ್ ಎಂದು‌ ಸದ್ದಾಯಿತು. “ಏನೋ‌ ಸಮಸ್ಯೆ ಆಗಿದೆ, ನಿನ್ನ ಬಿಟ್ಟಮೇಲೆ ಹಾಗೇ ಸೀದಾ ಟೊಯೋಟಾ ಸರ್ವೀಸ್ ಸೆಂಟರ್ಗೆ ಹೋಗಿ…

Read More

ಯಂತ್ರವೂ, ರಿಪೇರಿ ಡ್ರೆಸ್ಸೂ…

ಒಂದು ಸಲ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಮನೆಗೆ ಬರುತ್ತೇವೆಂದು ತಿಳಿಸಿದರು. ಕಿರಗೂರಿನ ಗಯ್ಯಾಳಿಗಳು ಸಿನೆಮಾ ಮಾಡುವುದರ ಬಗ್ಗೆ ಮಾತಾಡಬೇಕೆಂದು. ಅವತ್ತು ನನ್ನ ಮಹಾರಾಜ ಮಿಕ್ಸಿ, ಕೆಲಸ ಮಾಡುತ್ತಿದ್ದಾಗ ಕರ್ಕಶ ಸದ್ದಿನೊಂದಿಗೆ ಗಕ್ಕನೆ ನಿಂತು ಹೋಯಿತು. ಮಹಡಿ ಮೇಲಿದ್ದ ಇವರಿಗೆ ಆ ಕರ್ಕಶ ಸದ್ದಿನಿಂದಲೇ ಗೊತ್ತಾಗಿತ್ತು ಎಲ್ಲ.  ಸರಿರಾತ್ರಿ ಹನ್ನೆರಡೂವರೆ ಗಂಟೆಗೆ ಕೆಳಗೆ ಬಂದು ಮಿಕ್ಸಿಯನ್ನು ಬಿಚ್ಚಿ ನೋಡಿದ್ದಾರೆ. ಬಳಿಕ  ಎಮರಿ ಪೇಪರ್ ನಲ್ಲಿ ತಿಕ್ಕಿ ಕ್ಲೀನ್ ಮಾಡಿ ಹಾಕಿದ್ರು.. ಅವರಿಗೆ ನನ್ನ ಮೇಲೆ ಪ್ರೀತಿ ಎನ್ನುವುದಕ್ಕಿಂತ ಯಂತ್ರದ ಬಗ್ಗೆ ಕುತೂಹಲ. ರಾಜೇಶ್ವರಿ ತೇಜಸ್ವಿ ಬರೆಯುವ ಮೂಡಿಗೆರೆ ಹ್ಯಾಂಡ್ ಪೋಸ್ಟ್. 

Read More

ಬೀಸುಕಲ್ಲು ಸಾಗಿಸಿದ ಕಥೆ

ಊಟ ಉಪಚಾರವಾದ ಮೇಲೆ ನಾನು ಶ್ರೀದೇವಿ ಜೊತೆ ಅಡುಗೆ ಮನೆ ಸೇರಿದೆ. ನೋಡ್ತೀನಿ ಬಿಸೋಕಲ್ಲು ಒಂದು ಸಿದ್ಧವಾಗಿದೆ! ಒಮ್ಮೆಗೇ ನಾವಿಬ್ಬರು ಮಿಂಚಿನ ಸಂಚಾರವಾದಂತೆ ಕಾರ್ಯಪ್ರವೃತ್ತರಾದೆವು. ಇಬ್ಬರಿಗೂ ಒಂದೇಸಲ ಒಟ್ಟಿಗೇ ಪರಿಸ್ಥಿತಿಯ ಬಗ್ಗೆ ಜ್ಞಾನೋದಯವಾಯಿತು. ತೇಜಸ್ವಿಗೆ ಕಲ್ಲು ಗೋಚರಿಸದಂತೆ ಗೊತ್ತಾಗದಂತೆ ನಮ್ಮ ಮನೆಗೆ ಸಾಗಿಸುವುದಾದರೂ ಹೇಗೆ. ಕೊನೆಗೊಂದು ಉಪಾಯ ಮಾಡಿದೆವು. 
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಕಾಲದ ಗಾಳಕ್ಕೆ ಸಿಕ್ಕ ಮೀನು

ಅವತ್ತು ಅಮ್ಮ, ಅಣ್ಣ ಮನೆಗೆ ಬಂದಾಗ, ತೇಜಸ್ವಿಯವರು ಮನೆಯ ಚಮಚೆ ಬಳಸಿ, ಸ್ಪಿನರ್ ತಯಾರಿಸಿದ ಬಗ್ಗೆ  ಸವಿವರವಾಗಿ ಹೇಳಿದೆ. ಅಮ್ಮ ಬೆಚ್ಚಿ ಬಿದ್ದರು. `ಅಲ್ಲೇ, ನೀನು ಕುವೆಂಪು ಎಂದು ಕೆತ್ತಿಸಿದ್ದ ಚಮಚ ಕೊಟ್ಟು ಬಿಟ್ಟೆಯಾ`?. ಈ ಚಮಚಗಳನ್ನು ಚಿತ್ರಕೂಟದ ಮನೆಗೆ ಒಕ್ಕಲು ಬರುವಾಗ ಕುವೆಂಪು ಹೆಸರು ಹಾಕಿಸಿ ಅಮ್ಮ ತಂದಿಟ್ಟವು. ಆಗ ನನ್ನ ಪಜೀತಿ ಏನೆಂದು ಹೇಳಲಿ. ಇವರು ಕೇಳಿದ ಮೇಲೆ ಕೊಡದೇ ಇರುವುದು ಹೇಗೆ ಸಾಧ್ಯ. ತಮಾಷೆಯಾಗಿದೆ ಅಲ್ವೆ. ಅಮ್ಮನಿಗೆ ಕುವೆಂಪು ಮುಖ್ಯ, ನನಗೆ ನನ್ನವರು ಮುಖ್ಯ.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರೆದ ಬರಹ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ