ಬಾಯಿಗೆ ಸಿಗದ ಗೆಣಸು ಮತ್ತು ಮೇಷ್ಟ್ರು ಎಸೆದ ನೋಟ್ಬುಕ್

ಎಲ್ಲರಿಗಿಂತ ಚೆನ್ನಾಗಿಯೇ ಬರೆದಿದ್ದ ನನಗೆ, ಹಾಗೆ ಮೇಷ್ಟ್ರು ಹೊಡೆದದ್ದರಿಂದ ದಿಗ್ಬ್ರಾಂತನಾಗಿ ನೋಡುತ್ತಿದ್ದೆ. ನಾನು ಸಾವರಿಸಿಕೊಳ್ಳಲು ಬಹಳ ಸಮಯ ಬೇಕಾಯಿತು. ಕಣ್ಣಿನಿಂದ ನೀರು ಸುರಿಯುತ್ತಿತ್ತು. ನೋಟ್ ಬುಕ್ ನನ್ನಿಂದ ಇಪ್ಪತ್ತೈದು ಮೀಟರ್‌ನಷ್ಟು ದೂರ ಬಿದ್ದಿತ್ತು. ಹಾಳೆಗಳು ಗಾಳಿಗೆ ಹಾರುತ್ತಿದ್ದವು. ಅವರ ತರಗತಿ ಮುಗಿದ ಮೇಲೆ ಈ ಹಿಂದೆ ನಮಗೂ ಹೀಗೆ ಮಾಡಿದ್ದರು ಎಂದು ನನ್ನ ಗೆಳೆಯರು ನನ್ನನ್ನು ಸಮಾಧಾನ ಮಾಡಿದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More