ಆಳದ ದನಿ ತುಂಬಾ ಕ್ಷೀಣವಾಗಿರುತ್ತೆ..

ಪುಣ್ಯ ಕೊನೆಯ ಬಾರಿ ಮಾತನಾಡಿದ್ದು ಇದೆ ಒಂದು ವಾರದ ಕೆಳಗೆ. ಅವನ ಶಾಲಾ ವಾರ್ಷಿಕೋತ್ಸವದಲ್ಲಿ… ಈ ರಗಳೆಗಳೆಲ್ಲ ಶುರುವಾದದ್ದು ಸುರಭಿಯಿಂದಲೇ ಎನ್ನಬೇಕು. ಆರನೇ ತರಗತಿ ಓದುತ್ತಿದ್ದ ಸುರಭಿ, ಒಂದು ದಿನ ಶಾಲೆಯಿಂದ ಬಂದದ್ದೆ ಜೋರಾಗಿ ಅಳತೊಡಗಿದಳು. ‘ಅಣ್ಣ ಹುಡುಗಿ ತರ ಆಡ್ತಾನೆ ಅಂತ ಎಲ್ಲರು ನಂಗೆ ಹೆಣ್ಣಿಗನ ತಂಗಿ ಅಂತ ಆಡ್ಕತಾರೆ…ಕಾಡಿಸ್ತಾರೆ. ನಾಳೆಯಿಂದ ಶಾಲೆಗೇ ಹೋಗಲ್ಲ!’ ಎಂದು ರಂಪ ಮಾಡತೊಡಗಿದ್ದಳು. ಅಂದಿನಿಂದಲೇ ಪ್ರತಾಪ್ ಇವನನ್ನ ಸರಿ ಮಾಡಲು ಶುರುಮಾಡಿದ್ದು… ಪುಣ್ಯನ ದನಿ ಹುಡುಗಿಯ ದನಿಯನ್ನು ಹೋಲುತ್ತಿತ್ತು. ದಾದಾಪೀರ್‌ ಜೈಮನ್‌ ಬರೆಯುವ ʻಜಂಕ್ಷನ್‌ ಪಾಯಿಂಟ್‌ʼ ಅಂಕಣದ ಹೊಸ ಬರಹ

Read More