ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More