ನವೀನ್ ಮಧುಗಿರಿ ಬರೆದ ಕಥೆ “ಬೆಳಕು”

“ಇಷ್ಟೊತ್ತು ಗುಡುಗುತ್ತಿದ್ದ ಯಜಮಾನ ಈಗ ನಕ್ಕ. ‘ಎಲ್ಲಾ ನಂದೇ; ಇಲ್ಲಿರೋ ಕಾಡು, ಮರ, ಭೂಮಿ ಎಲ್ಲಾ ನಂದೇ..’ ಗಹಗಹಿಸಿ ಜೋರಾಗಿ ನಕ್ಕ. ಜೋರುಮಳೆ ಬಂದು ನಿಂತಂತೆ ಯಜಮಾನನ ನಗು ನಿಂತಿತು. ಐದಾರು ಬಾರಿ ಚಿಲುಮೆಯ ಕಿಡಿ ಕತ್ತಲಿನಲ್ಲಿ ಯಜಮಾನನ ಕೈ ಬಾಯಿಯ ಹಾದಿಯಲ್ಲಿ ಓಡಾಡಿತು. ಆ ಸಮಯ ಅಲ್ಲಿರುವ ಪ್ರತಿಯೊಬ್ಬರ ಉಸಿರಾಟದ ಶಬ್ದವು ಸ್ಪಷ್ಟವಾಗಿ ಕೇಳಿಸುವಷ್ಟು ನಿಶ್ಯಬ್ದ ಇತ್ತು. ಆ ನಿಶ್ಯಬ್ದವನ್ನು ಸೀಳಿ ಯಜಮಾನನ ಆಜ್ಞೆಯ ನುಡಿ ಬಂತು.”

Read More