ನವೋದಯ ದೀಪಕ್ಕೆ ಎಣ್ಣೆ ಹೊಯ್ದ ಕವಿ

ಸೇಡಿಯಾಪು ಕೃಷ್ಣಭಟ್ಟರಿಗೆ ಮಂಗಳೂರಿನಲ್ಲಿ ಪಂಡಿತ ಮುಳಿಯ ತಿಮ್ಮಪ್ಪಯ್ಯನವರ ಮಾರ್ಗದರ್ಶನ ಮತ್ತು ತರುಣ ಕವಿ ಕಡೆಂಗೊಂಡ್ಲು ಶಂಕರಭಟ್ಟರ ಗೆಳೆತನದ ಲಾಭವಾಯಿತು. ಅವರಿಬ್ಬರಿಂದ ಪ್ರೇರಣೆ ಪಡೆದು, ಮದ್ದಿನಂಗಡಿಯಲ್ಲಿ ಕುಳಿತೇ ಕನ್ನಡ – ಸಂಸ್ಕೃತ ಭಾಷೆಗಳನ್ನು ಖಾಸಗಿಯಾಗಿ ಅಧ್ಯಯನ ನಡೆಸಿ, ಮದರಾಸು ಸರ್ಕಾರ ನಡೆಸುತ್ತಿದ್ದ ‘ವಿದ್ವಾನ್’ ಪರೀಕ್ಷೆಯಲ್ಲಿ ಪಾಸಾದರು. ಆ ಪದವಿಯ ಬಲದಿಂದ 1929 ರಲ್ಲಿ ಸೈಂಟ್ ಅಲೋಷಿಯಸ್ ಹೈಸ್ಕೂಲಿನಲ್ಲಿ ಕನ್ನಡ ಪಂಡಿತರಾಗಿ ಸೇರಿಕೊಂಡು ಸುಮಾರು ಇಪ್ಪತ್ತು ವರ್ಷಗಳ ಕಾಲ ಕೆಲಸ ಮಾಡಿದರು.

Read More