ಅಂದುಕೊಳ್ಳದ ಪವಾಡ ಹೇಗೆ ಸಂಭವಿಸಿತು?

ಬೆಳಗ್ಗೆ ನಾಲ್ಕಕ್ಕೇ ಆಶ್ರಮಕ್ಕೆ ಹೋದರೆ ಬಾಬಾರ ದರ್ಶನವಾಗುತ್ತೆ ಅಂತ ಅಲ್ಲಿ ಯಾರೋ ಹೇಳಿದರು. ಸರಿರಾತ್ರಿಯವರೆಗೂ ಬೀದಿ ಸುತ್ತಿ ಮೀನಖಂಡ ಮುನಿಸಿಕೊಂಡರೂ ನಿದ್ದೆಯ ಸುಳಿವಿಲ್ಲ. ನಾಲ್ಕಕ್ಕೆ ಎದ್ದೆ ಆದರೆ ಬಿಳಿಬಣ್ಣದ ಬಟ್ಟೆ ನನ್ನ ಬಳಿ ಇರಲಿಲ್ಲ. ಅಲ್ಲಿ ಬಾಬಾ ಭಕ್ತರೆಲ್ಲಾ ಬೆಳ್ಳಂಬಿಳಿ ಬಿಟ್ಟರೆ ಕೇಸರಿ ಬಟ್ಟೆನೇ ತೊಡುವುದು. ನಾನು ಹೇಗೂ ಭಕ್ತೆ ಅಲ್ಲವಲ್ಲ, ಹಾಗಾಗಿ ಹಸಿರಾದರೂ ಏನಂತೆ ಎಂದುಕೊಂಡು ಇದ್ದ ಒಂದು ಹಸಿರು ಬಣ್ಣದ ಚೂಡಿದಾರ್ ಹಾಕಿಕೊಂಡು ಹೊರಟೆ. “ಕಂಡಷ್ಟೂ ಪ್ರಪಂಚ” ಪ್ರವಾಸ ಅಂಕಣದಲ್ಲಿ ಅಂಜಲಿ ರಾಮಣ್ಣ ಬರಹ

Read More